BengaluruNational

ಗಡಿ ವಿವಾದ ಇಲ್ಲ, ಅದು ಬಿಜೆಪಿ ಸರ್ಕಾರದ ಸೃಷ್ಟಿ; ಡಿ.ಕೆ.ಶಿವಕುಮಾರ್

ಬೆಂಗಳೂರು; ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವೆ ಗಡಿ ಸಮಸ್ಯೆ ಇಲ್ಲ. ಆದ್ರೆ ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರಗಳು ಈ ವಿವಾದವನ್ನು ಸೃಷ್ಟಿ ಮಾಡಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
 ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇದೆ. ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಇದೆ. ಅಂದರೆ ತ್ರಿಬಲ್‌ ಎಂಜಿನ್‌ ಸರ್ಕಾರವಿದೆ. ಕೇಂದ್ರ ಸರ್ಕಾರ ಮನಸು ಮಾಡಿದರೆ ಸಮಸ್ಯೆ ಬಗೆಹರಿಸಬಹುದು. ಆದ್ರೆ, ರಾಜಕೀಯಕ್ಕಾಗಿ ವಿವಾದ ಎಬ್ಬಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.
Share Post