ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ
ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಕ್ಕೆ ಪ್ರಮುಖ ಕಾರಣರಲ್ಲಿ ಒಬ್ಬರಾದ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಗಂಗಾಧರ ಅಜ್ಜಯ್ಯನ ಹೆಸರಲ್ಲಿನಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಜಮೀರ್ ಅಹ್ಮದ್ ಖಾನ್, ಎಂ.ಪಾಟೀಲ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿಯವರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.