BengaluruPolitics

ಸಂಜೆ ಮೇಲೆ ದೆಹಲಿಗೆ ತೆರಳಲಿರುವ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಸಿಎಂ ಯಾರನ್ನು ಮಾಡಬೇಕು ಎಂಬ ವಿಚಾರ ಈಗ ಕಾಂಗ್ರೆಸ್‌ ಹೈಕಮಾಂಡ್‌ ತಲುಪಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ ಮೇಲೆ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾತ್ರಿ ವೇಳೆಗೆ ದೆಹಲಿ ತಲುಪಲಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸ್ಥಾನ ಬಿಟ್ಟು ನನಗೆ ಯಾವ ಹುದ್ದೆಯೂ ಬೇಡ ಎಂದು ಹೇಳಿದ್ದಾರೆ. ಈಗಾಗಲೇ ಎರಡೂ ಕಡೆಯವರಿಂದ ಒತ್ತಡಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗದೆ ಹೈಕಮಾಂಡ್‌ ನಾಯಕರು ತಲೆಬಿಸಿ ಮಾಡಿಕೊಂಡಿದ್ದಾರೆ.

Share Post