BengaluruCrime

ಡಿ.ಕೆ.ಶಿವಕುಮಾರ್‌ಗೆ ಕಾನೂನು ಕಂಟಕದಿಂದ ರಿಲೀಫ್‌; ಸಿಬಿಐ ತನಿಖೆಗೆ ತಡೆಯಾಜ್ಞೆ ತೆರವಿಗೆ ನಿರಾಕರಣೆ

ನವದೆಹಲಿ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಕಾನೂನು ಕಂಟಕದಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ದಾಖಲಿಸಿದ್ದ ಕೇಸ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್‌ ತಡೆಯಾಜ್ಞೆ ತೆರವಿಗೆ ನಿರಾಕರಣೆ ಮಾಡಿದೆ.

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆ ನಡೆಸುತ್ತಿತ್ತು. ಆದ್ರೆ, ಹೈಕೋರ್ಟ್‌ ಮೊರೆಹೋಗಿದ್ದ ಡಿ.ಕೆ.ಶಿವಕುಮಾರ್‌, ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ತಂದಿದ್ದರು. ಸಿಬಿಐ ತಡೆಯಾಜ್ಞೆ ತೆರವಿಗೆ ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದರು. ಆದ್ರೆ ಸುಪ್ರೀಂ ಕೋರ್ಟ್‌, ಮಧ್ಯಂತರ ಆದೇಶ ನೀಡಲು ನಿರಾಕರಣೆ ಮಾಡಿದ್ದು, ಹೈಕೋರ್ಟ್‌ನಲ್ಲೇ ಈ ಬಗ್ಗೆ ಪ್ರಶ್ನೆ ಮಾಡಿ ಎಂದು ಸಿಬಿಐಗೆ ಹೇಳಿದೆ.

ಜೊತೆಗೆ ಜುಲೈ ತಿಂಗಳಿಗೆ ವಿಚಾರಣೆ ಮುಂದೂಡಲಾಗಿದೆ. ಇನ್ನು ಮುಂದಿನ ವಾರದಲ್ಲಿ ಹೈಕೋರ್ಟ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.

 

Share Post