BengaluruPolitics

ರಾಜರಾಜೇಶ್ವರಿ ನಗರ ಮತದಾರರ ಪಟ್ಟಿ ಅಕ್ರಮ; ಚುನಾವಣಾ ಆಯುಕ್ತರಿಗೆ ದೂರು

ಬೆಂಗಳೂರು; ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಹಲವರ ಹೆಸರುಗಳನ್ನು ಡಿಲೀಟ್‌ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ ಕೆ ಸುರೇಶ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಕುಸುಮ ಎಚ್, ಹನುಮಂತರಾಯಪ್ಪ ಹಾಗೂ ಸಂಸದ ಡಿ.ಕೆ.ಸುರೇಶ್‌ ಹಾಗೂ ಇತರ ಮುಖಂಡರು ಇಂದು ರಾಜ್ಯ ಚುನಾವಣೆ ಆಯೋಗದ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಿದ್ದು, ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇನ್ನು ಇದಕ್ಕೂ ಮೊದಲು ಯಶವಂತಪುರ ಡಿಸಿಪಿ ಅವರನ್ನು ಭೇಟಿಯಾದ ಸಂಸದ ಡಿ.ಕೆ.ಸುರೇಶ್‌ ಹಾಗೂ ಕುಸುಮಾ ಅವರು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಮೊಕದ್ದಮೆ ಮತ್ತು ಪೊಲೀಸ್ ಸಿಬ್ಬಂದಿಯ ಪಕ್ಷಪಾತಿ ಧೋರಣೆ ಕುರಿತು  ಅವರ ಗಮನಕ್ಕೆ ತಂದರು.

 

Share Post