BengaluruPolitics

ಬ್ರ್ಯಾಂಡ್‌ ಬೆಂಗಳೂರಿಗೆ ಪಣ ತೊಟ್ಟ ಡಿಕೆಶಿ; ಸಾರ್ವಜನಿಕರ ಅಭಿಪ್ರಾಯ ಕೇಳಿದ ಡಿಸಿಎಂ

ಬೆಂಗಳೂರು; ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಪಣ ತೊಟ್ಟಿದ್ದಾರೆ. ಬ್ರ್ಯಾಂಡ್‌ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಅವರು ಕೆಲಸ ಆರಂಭಿಸಿದ್ದಾರೆ. ಬೆಂಗಳೂರಿಗೆ ಐಟಿ, ಬಿಟಿ ಬರಲು ಎಸ್‌.ಎಂ.ಕೃಷ್ಣ ಅವರು ಕಾರಣರಾಗಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಸ್‌.ಎಂ.ಕೃಷ್ಣ ಅವರ ಶಿಷ್ಯರು. ಹೀಗಾಗಿ ಎಸ್‌.ಎಂ.ಕೃಷ್ಣ ಅವರ ಹಾದಿಯಲ್ಲೇ ನಡೆಯಲು ಡಿ.ಕೆ.ಶಿವಕುಮಾರ್‌ ಹೊರಟಿದ್ದಾರೆ. ಬೆಂಗಳೂರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಅವರು ಶಪಥ ಮಾಡಿದ್ದಾರೆ.

ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಐಟಿ, ಬಿಟಿ ಅಂಬಾಸಿಡರ್‌ಗಳನ್ನು ಕರೆದು ಮಾತುಕತೆ ನಡೆಸಿದ್ದಾರೆ. ಬ್ರ್ಯಾಂಡ್‌ ಬೆಂಗಳೂರು ಮಾಡಲು ಏನೆಲ್ಲಾ ಮಾಡಬೇಕು ಎಂಬುದರ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದಿದ್ದಾರೆ. ಇನ್ನೊಂದೆಡೆ ಬೆಂಗಳೂರು ನಗರ ವ್ಯಾಪ್ತಿಯ ಶಾಸಕರನ್ನು ಕರೆದು ಅವರ ಸಲಹೆ ಸೂಚನೆಗಳನ್ನು ಪಡೆದಿದ್ದಾರೆ. ಇದೀಗ ಸಾರ್ವಜನಿಕರಿಂದಲೂ ಅವರು ಸಲಹೆ ಸೂಚನೆಗಳನ್ನು ಪಡೆಯಲು ಮುಂದಾಗಿದ್ದಾರೆ. ಇಂದು ಸುದ್ದಿಗೋಷ್ಠ ಕರೆದಿದ್ದ ಅವರು, ಸಾರ್ವಜನಿಕರು ಕೂಡಾ ಇದಕ್ಕೆ ಸಲಹೆ ಸೂಚನೆಗಳನ್ನು ನೀಡಬಹುದು ಎಂದು ಹೇಳಿದ್ದಾರೆ.

ಈಗಾಗಲೇ ಹಲವಾರು ಮಂದಿ ಸಲಹೆ ಸೂಚನೆಗಳನ್ನು ಕೊಟ್ಟಿದ್ದಾರೆ. ಟ್ರಾಫಿಕ್‌ ವಿಚಾರ, ಪ್ಲೈ ಓವರ್‌, ಟನಲ್‌, ಪಾರ್ಕ್‌, ಆಸ್ಪತ್ರೆ ವಿಚಾರಗಳನ್ನು ಹೇಳಿದ್ದಾರೆ. ಮುಖ್ಯವಾಗಿ ಭ್ರಷ್ಟಾಚಾರ ತಡೆಗಟ್ಟಲು ಹಲವು ಸಲಹೆಗಳನ್ನು ನೀಡಿದ್ದಾರೆ. ಸಾರ್ವಜನಿಕರು ಕೂಡಾ ಸಲಹೆಗಳನ್ನು ನೀಡಬಹುದು ಎಂದು ಅವರು ಹೇಳಿದರು. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಾವು ಸಿದ್ಧರಿದ್ದಾರೆ. ಬೆಂಗಳೂರಿನಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸಿ, ವಿದೇಶಿ ಕಂಪನಿಗಳನ್ನು ಬೆಂಗಳೂರಿಗೆ ಬರುವಂತೆ ಸೆಳೆಯಲು ತೀರ್ಮಾನಿಸಿದ್ದೇವೆ. ಜೊತೆಗೆ ಬೆಂಗಳೂರನ್ನು ನಂಬಿ ಬಂದವರಿಗೆ ಬೇಕಾದ ವ್ಯವಸ್ಥೆ ಮಾಡುತ್ತೇವೆ. ಹೊರಗಿನಿಂದ ಬಂದಿರುವವು ಯಾರೂ ವಾಪಸ್‌ ಹೋಗಬಾರದು. ಅವರಿಗೆ ಬೇಕಾದ ವ್ಯವಸ್ಥೆಯನ್ನು ನಾವು ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿನ ನಾಗರೀಕರು ಹಾಗೂ ವಿದೇಶದಲ್ಲಿರುವ ಕನ್ನಡಿಗರು ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ತಮ್ಮ ಸಲಹೆಗಳನ್ನು www.brandbengaluru.karnataka.gov.in ವೆಬ್ ಸೈಟ್ ನಲ್ಲಿ ನಿಗದಿತ ಕಾಲಮಿತಿ ಜೂನ್ 30 ರ ಒಳಗಾಗಿ ನೀಡಬೇಕು ಎಂದು ವಿನಂತಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

Share Post