ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬೇಡಿ; ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು; ಬಿಡಿಎಗೆ ಅಂಟಿರುವ ಭ್ರಷ್ಟಾಚಾರದ ಹಣೆಪಟ್ಟಿಯನ್ನು ಕಿತ್ತು ಹಾಕಬೇಕು. ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಪ್ರಾಧಿಕಾರದ ಯೋಜನೆಗಳು, ಕಾನೂನು ವ್ಯಾಜ್ಯಗಳು ಮತ್ತು ಸಮಸ್ಯೆಗಳ ಕುರಿತು ಚರ್ಚಿಸಿದರು.
ನಂತರ ಮಾತನಾಡಿದ ಅವರು, ಪ್ರಾಧಿಕಾರದಲ್ಲಿರುವ ಕಾನೂನು ವ್ಯಾಜ್ಯಗಳನ್ನು ಬಗೆಹರಿಸಬೇಕು. ಭೂಮಾಲೀಕರು ಮತ್ತು ರೈತರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಬಡಾವಣೆಗಳ ರಚನೆ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ಸೂಚಿಸಿದರು. ಯೋಜನೆಗೆ ಭೂಸ್ವಾಧೀನ ಪಡಿಸಿಕೊಳ್ಳುವ ಮೊದಲು ಸಮರ್ಪಕವಾಗಿ ಯೋಜನೆಯ ಕರಡು ರೂಪಿಸಬೇಕು ಎಂದುರು.