ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.3; ಡಾ.ಕೆ.ಸುಧಾಕರ್
ಬೆಂಗಳೂರು; ರಾಜ್ಯದಲ್ಲಿ ಕೊವಿಡ್ ಪಾಸಿವಿಟಿ ದರ ಶೇ.೩ರಷ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಕೊವಿಡ್ ಏರಿಕೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ದೇಶದ ಮೂರು ರಾಜ್ಯಗಳ್ಲಿ ಸೋಂಕಿತರು ಹೆಚ್ಚಳವಾಗುತ್ತಿದ್ದಾರೆ. ಹೀಗಾಗಿ ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಲಸಿಕೆ ಪಡೆಯಬೇಕು ಎಂದು ಸುಧಾಕರ್ ಮನವಿ ಮಾಡಿದರು.