BengaluruCrime

ಇಬ್ಬರು ಡ್ರಗ್‌ ಪೆಡ್ಲರ್ಸ್‌ ಅರೆಸ್ಟ್;‌ 30 ಲಕ್ಷ ರೂ. ಮಾದಕ ವಸ್ತು ವಶ

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್‌ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 30 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎಂಡಿಎಂಎ ಕ್ರಿಸ್ಟೆಲ್‌, ಚರಸ್‌ ಹಾಗೂ ಗಾಂಜಾವನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ನೈಜೀರಿಯಾ ವ್ಯಕ್ತಿಯಿಂದ ಮಾದಕ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ, ಅದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

Share Post