ಪಾನಿಪುರಿ ಕಿಟ್ಟಿ-ದುನಿಯಾ ವಿಜಿ ಪ್ರಕರಣ ರಿ ಓಪನ್
ಬೆಂಗಳೂರು; ನಟ ದುನಿಯಾ ವಿಜಯ್ ಮತ್ತು ಜಿಮ್ ತರಬೇತಿದಾರ ಪಾನಿಪುರಿ ಕಿಟ್ಟಿ ನಡುವ ಗಲಾಟೆಗೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
ಹೈಕೋರ್ಟ್ ಸೂಚನೆಯ ಮೇರೆಗೆ ದುನಿಯಾ ವಿಜಯ್ ಮಗನ ಮೇಲೆ ಹಲ್ಲೆ ಮಾಡಿದ್ದ ಪಾನಿಪುರಿ ಕಿಟ್ಟಿ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ.
2018 ರಲ್ಲಿ ಈ ಪ್ರಕರಣ ನಡೆದಿತ್ತು. ಇದನ್ನೀಗ ರಿ ಓಪನ್ ಮಾಡಲಾಗಿದೆ. ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ವಿರುದ್ಧ ಪೊಲೀಸರು ಎಫ್.ಐ.ಆರ್ ಹಾಕಿದ್ದಾರೆ.
2018ರಲ್ಲಿ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ದೇಹದಾರ್ಢ್ಯ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಪಾನಿಪುರಿ ಕಿಟ್ಟಿ ಟೀಂಗೂ ಹಾಗೂ ದುನಿಯಾ ವಿಜಯ್ ಟೀಂ ಗೂ ಗಲಾಟೆ ನಡೆದಿತ್ತು.