ಹುಬ್ಬಳ್ಳಿ ಕೋಮು ಗಲಭೆ ಪ್ರಕರಣ ಕೈಬಿಡಲು ಡಿಸಿಎಂ ಶಿಫಾರಸು; ಸಿಎಂ ಏನಂದ್ರು..?
ಬೆಂಗಳೂರು; ಹಳೇ ಹುಬ್ಬಳ್ಳಿಯಲ್ಲಿ ನಡೆದ ಕೋಮುಗಲಭೆ ಪ್ರಕರಣ ಕೈಬಿಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗೃಹ ಇಲಾಖೆಗೆ ಶಿಫಾರಸು ಮಾಡಿ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಆಧರಿಸಿ, ಹಳೇ ಹುಬ್ಬಳ್ಳಿ ಪ್ರಕರಣ ಸೇರಿ ಹಲವು ಪ್ರಕರಣ ಹಿಂಪಡೆಯುವ ಬಗ್ಗೆ ದಾಖಲೆ ಸಹಿತ ಎಡಿಜಿಪಿ ಅಭಿಪ್ರಾಯ ಕೇಳಿದ್ದಾರೆ.
ಇನ್ನು ಈ ಬಗ್ಗೆ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ವಕೀಲರು ಹಾಗೂ ಹೋರಾಟಗಾರರು ಪತ್ರ ಬರೆದಿದ್ದಾರೆ. ಅದರ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ. ಆ ಪತ್ರವನ್ನು ನಾನು ಇವತ್ತೇ ನೋಡಿದ್ದೇನೆ. ಆದ್ರೆ ಯಾವುದೇ ಕೇಸ್ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.