Bengaluru

ನಾಲ್ಕನೇ ತರಗತಿ ಪಠ್ಯ ಪರಿಷ್ಕರಿಸಿಯೇ ಇಲ್ಲ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟನೆ

ಬೆಂಗಳೂರು; ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿಯ ‘ಪರಿಸರ ಅಧ್ಯಯನ’ ಪುಸ್ತಕದ ಪರಿಷ್ಕರಣೆ ಆಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳನ್ನು‌ ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ‌ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ. ಸುಳ್ಳನ್ನು ಎಷ್ಟು ಸಲ ಹೇಳಿದರೂ ಸತ್ಯವಾಗದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ಕುವೆಂಪು ಅವರ ಬಗ್ಗೆ ಇದ್ದ ವಿಷಯಾಂಶವನ್ನು ಕೈಬಿಡಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ವಾಸ್ತವವಾಗಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು 4ನೇ ತರಗತಿಯ ಪಠ್ಯವನ್ನು ಪರಿಷ್ಕರಿಸಿಲ್ಲ ಎಂದು ನಾಗೇಶ್ ಸ್ಪಷ್ಟಪಡಿಸಿದ್ದಾರೆ.

Share Post