Bengaluru

ಶಾಲೆಗಳಿಗೆ ಬೀಗ; ಜಿಲ್ಲಾಧಿಕಾರಿಗಳಿಗೆ ಅಧಿಕಾರ ಎಂದ ಶಿಕ್ಷಣ ಸಚಿವ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಬಂದ್‌ ಮಾಡುವುದಕ್ಕೆ ಆಗುವುದಿಲ್ಲ. ಬದಲಾಗಿ ಶಾಲೆಗಳನ್ನು ಮುಚ್ಚುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವಾರದಲ್ಲಿ ರಾಜ್ಯದಲ್ಲಿ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. 1 ರಿಂದ 10 ನೇ ತರಗತಿಯ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಿದರು. ಯಾವ ಜಿಲ್ಲೆಯಲ್ಲಿ ಸೋಂಕು ಹೆಚ್ಚಿದೆಯೋ, ಆ ಜಿಲ್ಲೆಯಲ್ಲಿ ಅಲ್ಲಿನ ಅಗತ್ಯಕ್ಕೆ ತಕ್ಕಂತೆ ಕ್ರಮ ಕೈಗೊಳ್ಳುವುದು ಉತ್ತಮ. ಜಿಲ್ಲಾಧಿಕಾರಿಗಳೇ ನಿರ್ಧಾರ ತೆಗೆದುಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆ ಮುಚ್ಚುವ ಬಗ್ಗೆ ಜಿಲ್ಲಾಧಿಕಾರಿಗಳೇ ತೀರ್ಮಾನಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Share Post