Bengaluru

ಬೆಸ್ಕಾಂ ನಿರ್ಲಕ್ಷ್ಯಕ್ಕೆ ಖಾಸಗಿ ಕಂಪನಿ ಉದ್ಯೋಗಿ ಬಲಿ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಮೃತ ಯುವಕ. ನಿನ್ನೆ ತಡರಾತ್ರಿ ತನ್ನ ಸಹೋದರನ ಜೊತೆ ಬರುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

     ಹೊಸಕೋಟೆ ಮೂಲಕದ ಕಿಶೋರ್‌ ಕೆಲಸ ಮುಗಿಸಿ ತಡರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಕುಟುಂಬಸ್ಥರು ಬೆಸ್ಕಾಂ ವಿರುದ್ಧ ಸಂಜಯ್ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾವು ನೋವು ಸಂಭವಿಸುತ್ತಿದ್ದರೂ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share Post