ಗ್ರಾಹಕರಿಗೆ ಮತ್ತೆ ಸಂಕಷ್ಟ: ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ..?ಏಪ್ರಿಲ್‌ನಲ್ಲಿ ಪರಿಷ್ಕರಣೆ..
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್, ತೈಲ, ಸಿಲಿಂಡರ್ ಬೆಲೆ ಏರಿಕೆಯಾದ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದೆ. ಶೀಘ್ರದಲ್ಲೇ ರಜ್ಯದಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆಯಾಗುವ ಲಕ್ಷಣಗಳಿವೆ. (ಕೆಇಆರ್‌ಸಿ) ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆಗೆ ಮುಂದಾಗಿದೆ ಏಪ್ರಿಲ್ 1ರಿಂದ ಅನ್ವಯವಾಗುವಂತೆ ದರ ಪರಿಷ್ಕರಣೆ ಮಾಡುವ ಸಾಧ್ಯತೆಗಳಿವೆ. ಪ್ರತಿ ಯೂನಿಟ್‌ಗೆ 1.50ರೂ ಹೆಚ್ಚಿಸುವಂತೆ ಪ್ರಸ್ತಾಪ ಮಾಡಲಾಗಿದೆ.
ಕೆಇಆರ್‌ಸಿಗೆ ಈಗಾಗಲೇ ವಿದ್ಯುತ್ ಪೂರೈಕೆ ಕಂಪನಿಗಳಿಂದ ಪ್ರಸ್ತಾವನೆ ಕಳಿಸಲಾಗಿದೆ. ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರಸ್ತಾವನೆ ಕಳಿಸಿದ್ದಾರೆ. ಪ್ರತಿ ಯೂನಿಟ್‌ಗೆ 35 ರಿಂದ 45 ಪೈಸೆ ಹೆಚ್ಚಳವಾಗುವ ಸಾಧ್ಯತೆಯಿದೆ. ದರ ಹೆಚ್ಚಳ ಬಗ್ಗೆ ಕೆಇಆರ್‌ಸಿ ಅಭಿಪ್ರಾಯ ಸಂಗ್ರಹ ಮಾಡಿದೆ. ತಿಂಗಳ ಅಂತ್ಯದಲ್ಲಿ ದರ ಪರಿಷ್ಕರಣೆ ಪಟ್ಟಿ ಬಿಡಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಿರ್ವಹಣಾ ವೆಚ್ಚ ಹೆಚ್ಚಳ ಹಿನ್ನೆಲೆ ದರ ಪರಿಷ್ಕರಣೆಗೆ ಕಂಪನಿಗಳು ಪಟ್ಟು ಹಿಡಿದಿವೆ. ಜನರಿಗೆ ಹೊರೆಯಾಗದಂತೆ ಕರೆಂಟ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಒರತಿವರ್ಷ ಏಪ್ರಿಲ್‌ನಲ್ಲಿ ವಿದ್ಯುತ್ ದರ ಪರಿಷ್ಕರಣೆ ನಡೆಯುತ್ತದೆ. ಅಂತೆಯೇ ಈ ವರ್ಷ ಏರಿಕೆಯಾಗುವ ಎಲ್ಲಾ ಸಾಧ್ಯತೆಗಳು ಹೆಚ್ಚಿವೆ.