ಸಾರ್ವಜನಿಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಸಾಧ್ಯತೆ ?
ಬೆಂಗಳೂರು : ಈಗಾಗಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ದಿನ ನಿತ್ಯ ಬಳಸುವ ವಸ್ತುಗಳ ಬೆಲೆ ಗಗನಕ್ಕೇರಿದೆ. ಈಗ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ಮುಟ್ಟಲಿದೆ. ವಿದ್ಯುತ್ ದರ ಏರಿಕೆಯ ಬಿಸಿ ಎದುರಾಗಿದ್ದು, ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ.
ಪ್ರತಿ ಯುನಿಟ್‌ಗೆ 1 ರೂ. 50 ಪೈಸೆ ಹೆಚ್ಚಳ ಮಾಡುವಂತೆ ಕೆಇಆರ್‌ಸಿಗೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.