Bengaluru

ESHWARAPPA ISSUE: ನಿಲ್ಲದ ಗದ್ದಲ; ಪರಿಷತ್‌ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ಕೆಲಕಾಲ ಕಲಾಪ ಮುಂದೂಡಿದ ನಂತರ ಪರಿಷತ್‌ ಕಲಾಪ ಆರಂಭವಾದರೂ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ಮುಂದುವರೆಸಿದರು. ಇದೇ ವೇಳೆ ಆಡಳಿತ ಪಕ್ಷದ ಸದಸ್ಯರು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು. ಈ ಕಾರಣದಿಂದ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಪರಿಷತ್‌ ಕಲಾಪವನ್ನು ಸೋಮವಾರಕ್ಕೆ  ಮುಂದೂಡಿದ್ದಾರೆ.

ಕಾಂಗ್ರೆಸ್‌ ಸದಸ್ಯ ಸಲೀಂ ಅಹ್ಮದ್‌ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಸದನದಲ್ಲಿ ಇಲ್ಲದವರ ವಿರುದ್ಧ ಘೋಷಣೆ ಕೂಗುವುದು ಸರಿಯಲ್ಲ ಎಂದು ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಸಲೀಂ ಅಹ್ಮದ್‌ ಅವರನ್ನು ಸದನದಿಂದ ಹೊರಗೆ ಕಳುಹಿಸುವಂತೆ ಪಟ್ಟು ಹಿಡಿದರು. ಜೊತೆಗೆ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಬೇಕೆಂದು ಆಗ್ರಹಿಸಿದರು.

ಈ ಕಾರಣದಿಂದಾಗಿ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರು ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಬಿಜೆಪಿ ಸದಸ್ಯರು, ಭಾರತ್‌ ಮಾತಾಕೀ ಜೈ ಎಂಬ ಘೋಷಣೆಗಳನ್ನು ಕೂಗಿದರು. ಎಷ್ಟು ಹೇಳಿದರೂ ಪರಿಸ್ಥಿತಿ ತಿಳಿಯಾಗದ ಕಾರಣ, ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

Share Post