Bengaluru

ESHWARAPPA ISSUE: ಸದನದಲ್ಲಿ ಕಾಂಗ್ರೆಸ್‌ ಗದ್ದಲ; ಕಲಾಪ 3 ಗಂಟೆಗೆ ಮುಂದೂಡಿಕೆ

ಬೆಂಗಳೂರು: ಸಚಿವ ಈಶ್ವರಪ್ಪನವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ದೇಶದಲ್ಲಿ ರಾಷ್ಟಧ್ವಜದ ಜಾಗದಲ್ಲಿ ಕೇಸರಿ ಧ್ವಜ ಹಾರಿಸುವ ಸಮಯ ಬರುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ರಾಷ್ಟ್ರಧ್ವಜಕ್ಕೆ ಗೌರವ ಕೊಡುವುದಿಲ್ಲ. ಹೀಗಾಗಿಯೇ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಹೀಗಾಗಿ, ಈಶ್ವರಪ್ಪ ವಿರುದ್ಧ ಕ್ರಮ ಆಗಲೇಬೇಕು. ಇಲ್ಲದಿದ್ದರೆ ಅಹೋರಾತ್ರಿ ಹೋರಾಟ ನಡೆಸುವುದಕ್ಕೆ ತೀರ್ಮಾನ ಮಾಡಿದ್ದೇವೆ. ಈ ವಿಚಾರಕ್ಕೆ ತಾರ್ಕಿಕ ಅಂತ್ಯ ಸಿಗಲೇಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು.

ಇನ್ನು ಇದೇ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ ಜೋರಾಗಿತ್ತು. ಸದನದ ಬಾವಿಗಿಳಿದು ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಸದನವನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಲಾಯಿತು.

Share Post