BengaluruPolitics

ಮೋದಿ ಮುಖ ತೋರಿಸಿದರೂ ವೋಟು ಬರಲ್ಲ, ಅದಕ್ಕೇ ಚಿತ್ರನಟರಿಗೆ ಶರಣು; ಬಿಜೆಪಿ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು; ಬಿಜೆಪಿ ಪಕ್ಷ ನಟ ಸುದೀಪ್‌ ಅವರ ಬೆಂಬಲ ಪಡೆಯುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್‌ ವ್ಯಂಗ್ಯ ಮಾಡಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಅಧಿಕೃತ ಟ್ವಿಟರ್‌ ಅಕೌಂಟ್‌ನಲ್ಲಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ನಾಯಕರನ್ನು ಲೇವಡಿ ಮಾಡಲಾಗಿದೆ. ಮೋದಿ ಮುಖ ತೋರಿಸಿದರೂ ಓಟು ಗಿಟ್ಟೋದಿಲ್ಲ. ನನ್ನ ಮುಖ ತೋರಿಸಿದರೂ ಮತ ಬರೋದಿಲ್ಲ ಎಂದು ಸಿಎಂ ಬೊಮ್ಮಾಯಿಯವರು ಸಿನಿಮಾ ನಟರಿಗೆ ಶರಣಾಗಿದ್ದಾರೆ ಎಂದು ವ್ಯಂಗ್ಯ ಮಾಡಲಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಇಲ್ಲಿದೆ.

 

ಕಾಂಗ್ರೆಸ್‌ ಟ್ವೀಟ್‌;

ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ @BSBommai  ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ! BSY ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ!

Share Post