Bengaluru

ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡ ವಿದ್ಯಾರ್ಥಿಗಳನ್ನು ರಕ್ಷಿಸುವಂತೆ ಸರ್ಕಾರಕ್ಕೆ ಹೆಚ್‌ಡಿಕೆ ಮನವಿ

ಬೆಂಗಳೂರು: ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕ್ಷೇಮವಾಗಿ ವಾಪಸ್‌ ತಾಯ್ನಾಡಿಗೆ ವಾಪಸ್‌ ಕರೆತರಬೇಕೆಂದು ಮಾಝಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್‌ʼನಲ್ಲಿ ರಾಜ್ಯದ 91 ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿಯನ್ನು ಸರಕಾರವೇ ನೀಡಿದೆ. ಆ ದೇಶದ ಕೀವ್‌ ನಗರ ಸೇರಿ ವಿವಿಧೆಡೆ ಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಎಲ್ಲ ತುರ್ತು ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್‌ ಕರೆತರಬೇಕು.

ಶೆಲ್‌, ಕ್ಷಿಪಣಿ, ಬಾಂಬ್‌ ದಾಳಿ ಭೀತಿಯಿಂದ ವಿದ್ಯಾರ್ಥಿಗಳು ಬಂಕರ್‌ʼಗಳಲ್ಲಿ & ಮೆಟ್ರೋ ರೈಲು ಅಂಡರ್ʼಗ್ರೌಂಡ್ʼನಲ್ಲಿ ಆಶ್ರಯ ಪಡೆದಿದ್ದಾರೆ. ಆ ದೃಶ್ಯಗಳು ಕಳವಳಕಾರಿ. ಸ್ಫೋಟದ ಸದ್ದು ಕೇಳಿಸಿಕೊಂಡು ಕ್ಷಣಕ್ಷಣಕ್ಕೂ ಭಯಭೀತಿಯಲ್ಲಿರುವ ಅವರೆಲ್ಲರನ್ನು ನೋಡಿದರೆ ಯುದ್ಧದ ಭೀಕರತೆ ಎಂಥದ್ದು ಎಂಬುದನ್ನು ಅರಿಯಬಹುದು.

ಅಲ್ಲಿ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರೆ, ಇಲ್ಲಿ ಅವರ ತಂದೆ-ತಾಯಿ ಮಕ್ಕಳ ಬಗ್ಗೆ ತೀವ್ರ ಆತಂಕದಲ್ಲಿದ್ದಾರೆ. ಉಕ್ರೇನ್‌ʼನಲ್ಲಿ ಬಾಂಬ್‌ʼಗಳ ಮೊರೆತಕ್ಕೆ ಅವರು ಮತ್ತಷ್ಟು ಕಂಗಾಲಾಗುತ್ತಿದ್ದಾರೆ.

ನಾನು ಕೂಡ ಕನ್ನಡಿಗರ ರಕ್ಷಣೆಗೆ ನೇಮಕಗೊಂಡಿರುವ ಉಸ್ತುವಾರಿ ಅಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೇಂದ್ರ ಸರಕಾರವು ತನ್ನೆಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಂಡು ಉಕ್ರೇನ್‌ʼನಲ್ಲಿರುವ ಎಲ್ಲ ಕನ್ನಡಿಗರನ್ನೂ ಏರ್‌ಲಿಫ್ಟ್‌ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Share Post