Exclusive; 13000 ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ; ಸರ್ಕಾರದ ಆದೇಶ
ಬೆಂಗಳೂರು; 2006ರ ನಂತರ ನೇಮಕವಾದ ರಾಜ್ಯ ಸರ್ಕಾರದ 13 ಸಾವಿರ ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದ ಪ್ರತಿಯೊಂದಿಗೆ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ನಲ್ಲಿ ಏನಿದೆ..?
2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ.
ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ.
– ಮುಖ್ಯಮಂತ್ರಿ @siddaramaiah