ಮೈಸೂರು ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಕಾಂಗ್ರೆಸ್ ಕಸರತ್ತು; ಡಿಕೆಶಿ ಹೇಳಿದ್ದೇನು..?
ಬೆಂಗಳೂರು; ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಜೊತೆಗೆ ಜೆಡಿಎಸ್ ಕೂಡಾ ಪ್ರಾಬಲ್ಯವಿದೆ. ಆದ್ರೆ ಈ ಬಾರಿ ಈ ಭಾಗದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಗಳಿಸಿಕೊಳ್ಳಲು ಕೆಪಿಸಿಸಿ ರಣತಂತ್ರ ಹೆಣೆಯುತ್ತಿದೆ. ಅದಕ್ಕಾಗಿ ಕಳೆದ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಒಕ್ಕಲಿಗ ನಾಯಕರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಬಿಜೆಪಿ ಪ್ರಾಬಲ್ಯ ಮೆರೆಯಲು ಕಸರತ್ತು ಶುರು ಮಾಡಿದೆ. ಆದ್ರೆ ಇದನ್ನು ತಪ್ಪಿಸುವುದು ಹೇಗೆಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಹಲವು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರನ್ನು ಸೆಳೆಯಲು ಮುಂದಾಗಿವೆ. ಹೀಗಾಗಿ, ಕಾಂಗ್ರೆಸ್ ಯಾವ ರೀತಿಯಲ್ಲಿ ಕಾರ್ಯತಂತ್ರ ಮಾಡಬೇಕು ಎಂಬುದರ ಬಗ್ಗೆ ಕಾಂಗ್ರೆಸ್ ಒಕ್ಕಲಿಗ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ದೇವೇಗೌಡರನ್ನು ಟಾರ್ಗೆಟ್ ಮಾಡುವುದು ಬೇಡ. ಬಿಜೆಪಿಯವರು ಟಿಪ್ಪುಸುಲ್ತಾನ್‌ರನ್ನು ವಿರೋಧಿಸುವುದು, ಹನುಮ ಜಯಂತಿ ಆಯೋಜನೆ ಸೇರಿದಂತೆ ಹಿಂದುತ್ವ ಅಜೆಂಡಾ ಮುನ್ನೆಲೆಗೆ ತಂದಿದ್ದಾರೆ. ಇದನ್ನು ಜಾಣತನದಿಂದ ಹೇಗೆ ಹತ್ತಿಕ್ಕಬೇಕು ಎಂಬುದರ ಬಗ್ಗೆ ಡಿ.ಕೆ.ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.