ಗಂಡುಮಗುವಿನ ತಂದೆಯಾದ ಖ್ಯಾತ ನಟ ಧ್ರುವ ಸರ್ಜಾ
ಬೆಂಗಳೂರು; ಸ್ಯಾಂಡಲ್‌ವುಡ್ ಖ್ಯಾತ ನಟ ಧ್ರು ಸರ್ಜಾ ಗಂಡು ಮಗುವಿನ ತಂದೆಯಾಗಿದ್ದಾರೆ. ಅವರ ಪತ್ನಿ ಪ್ರೇರಣಾ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೊದಲ ಮಗು ಹೆಣ್ಣಾಗಿದ್ದು, ಎರಡನೇ ಮಗು ಗಂಡಾಗಿದೆ. ಹಬ್ಬದ ಸಂದರ್ಭದಲ್ಲಿ ಸರ್ಜಾ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಕೆಲ ದಿನಗಳ ಹಿಂದೆ ಕನಕಪುರ ರಸ್ತೆಯ ಫಾರ್ಮ್ ಹೌಸ್‌ನಲ್ಲಿ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮ ನೆರವೇರಿತ್ತು. ಅದರ ವಿಡಿಯೋವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದರು.