BengaluruCrime

ಮಹಾರಾಣಿ ಕಾಲೇಜಿನಲ್ಲಿ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿನಿಯರು ಗಂಭೀರ

ಬೆಂಗಳೂರು; ಇಂದು ಬೆಳಗ್ಗೆ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕ್ಯಾಂಪಸ್​ ಒಳಗೆ ಭೀಕರ ಅಪಘಾತ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿಗೆ ತೀವ್ರ ಗಾಯಗಳಾಗಿದ್ದು, ಮಾರ್ಥಾಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೈನ್‌ ಆಸ್ಪತ್ರೆಗೆ ಶಿಫ್ಟ್‌ ಮಾಡುವ ಸಾಧ್ಯತೆ ಇದೆ. ಮತ್ತೊಬ್ಬ ವಿದ್ಯಾರ್ಥಿನಿ ಕೂಡಾ ಗಾಯಗೊಂಡಿದ್ದಾರೆ.

ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೂಲಗಳ ಪ್ರಕಾರ ಕಾರು ವಿವಿಯ ಪ್ರೊಫೆಸರ್ ಒಬ್ಬರದು ಎಂದು ಮಾಹಿತಿ ತಿಳಿದು ಬಂದಿದೆ. ಅತಿವೇಗವಾಗಿ ಬಂದು ಕಾರು, ಇಬ್ಬರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದು ಬಳಿಕ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎರಡೂ ಕಾರುಗಳು ನಜ್ಜುಗುಜ್ಜಾಗಿವೆ.

ಕಾರಿನ ಬ್ರೇಕ್‌ ಫೇಲ್‌ ಆಗಿ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇಂಗ್ಲೀಷ್‌ ಪ್ರೊಫೆಸರ್‌ ನಾಗರಾಜ್‌ ಅವರಿದ್ದ ಕಾರು ಎನ್ನಲಾಗಿದೆ.

 

Share Post