BengaluruCrime

ನೈಸ್‌ ರಸ್ತೆಯಲ್ಲಿ ಭೀಕರ ಅಪಘಾತ; ಮಗು ಸೇರಿ ಇಬ್ಬರ ಸಜೀವದಹನ!

ಬೆಂಗಳೂರು; ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಘಟನೆಯಲ್ಲಿ ತಾಯಿ ಹಾಗೂ ಎರಡು ವರ್ಷದ ಮಗು ಸಾವನ್ನಪ್ಪಿದೆ. ಸೋಮಪುರ ಬಳಿಯ ನೈಸ್‌ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.

ಇಂದು ಮುಂಜಾನೆ ಕಾರೊಂದು ಮೈಸೂರು ರಸ್ತೆಯಿಂದ ಕನಕಪುರ ರಸ್ತೆ ಕಡೆಗೆ ಹೋಗುತ್ತಿತ್ತು. ಈ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಮೋರಿಗೆ ಗೋಡೆಗೆ ಗುದ್ದಿದೆ. ಕೂಡಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ತಾಯಿ ಹಾಗೂ ಮಗು ಬೆಂಕಿಗೆ ಆಹುತಿಯಾಗಿದ್ದಾರೆ.

ಸಿಂಧು ಹಾಗೂ ಎರಡು ವರ್ಷದ ಮಗು ಸಾವನ್ನಪ್ಪಿದವರು. ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಲಾರಿ ಕೂಡಾ ರಸ್ತೆ ಪಕ್ಕ ಪಲ್ಟಿಯಾಗಿದೆ.

 

Share Post