Bengaluru

ಕೆಂಗೇರಿಯಲ್ಲಿ ಪೊಲೀಸ್‌ ರಿಕವರಿ ವಾಹನಗಳಿಗೆ ಬೆಂಕಿ

ಬೆಂಗಳೂರು: ಪೊಲೀಸರು ಸೀಜ್‌ ಮಾಡಿದ್ದ ವಾಹನಗಳಿಗೆ ಬೆಂಕಿ ಬಿದ್ದಿರುವ ಘಟನೆ ಕೆಂಗೇರಿ ಪೊಲೀಸ್‌ ಠಾಣೆ ಬಳಿ ನಡೆದಿದೆ. ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಹಿಂಭಾಗದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ನೂರಾರು ವಾಹನಗಳನ್ನು ನಿಲ್ಲಿಸಲಾಗಿತ್ತು. ಈ ವಾಹನಗಳಿಗೆ ಬೆಂಕಿ ಬಿದ್ದಿದ್ದು, ದೊಡ್ಡ ಮಟ್ಟದಲ್ಲಿ ಬೆಂಕಿ ಆವರಿಸಿದೆ.

ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡುತ್ತಿವೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ.

 

 

Share Post