Bengaluru

ಬೆಂಗಳೂರಿನ ಶಾಪಿಂಗ್‌ ಮಾಲ್‌ನಲ್ಲಿ ಬೆಂಕಿ ದುರಂತ

ಬೆಂಗಳೂರು : ಅರಕೆರೆ ಗೇಟ್‌ ಬಳಿಯಿರುವ ಸೌಥ್ ಇಂಡಿಯನ್ ಮಾಲ್‍ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗೃಹ ಬಳಕೆ ವಸ್ತುಗಳೆಲ್ಲಾ ಬೆಂಕಿಗೆ ಆಹುತಿ ಆಗಿದೆ ಎಂದು ತಿಳಿದು ಬಂದಿದೆ.

ಮಾಲ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ಇಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ನೈಟ್‌ ಕರ್ಫ್ಯೂ ಇರುವ ಕಾರಣ ರಾತ್ರಿ ಮಾಲ್‌ನಲ್ಲಿ ಯಾವ ಸಿಬ್ಬಂದ್ದಿಯೂ ಇರಲಿಲ್ಲ. ಬೆಂಕಿ ಹೊತ್ತಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ನೈಟ್‌ ಬೀಟ್‌ ಪೊಲೀಸರು ಮಾಲ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ತಕ್ಷಣ ಅಗ್ನಿ ಶಾಮಕ ದಳಕ್ಕೆ ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಿದ್ದು ಸ್ವಲ್ಪ ಕಾಲದ ನಂತರ ಗೊತ್ತಾಗಿದ್ದರಿಂದ ಮಾಲ್‌ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು, ಗೃಹಬಳಕೆ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಏಳು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

Share Post