BengaluruCrime

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ ಪ್ರಕರಣ; ಮೂವರು ಪೊಲೀಸ್‌ ವಶಕ್ಕೆ

ಬೆಂಗಳೂರು; ನಿನ್ನೆ ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಹಾಗೂ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವಾಂತರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಬಿಬಿಎಂಪಿಯ ಮೂವರು ಡಿ ಗ್ರೂಪ್‌ ನೌಕರರನ್ನು ಪೊಲೀಸರು ವಶಕ್ಕೆ ಪಡೆದು ಘಟನೆಗೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಘಟನಾ ಸ್ಥಳದಲ್ಲಿದ್ದ ಹಲವರು ಗಾಯಗೊಂಡಿದ್ದರು. ಆದ್ರೆ ಇವರು ಕೂಡಾ ಘಟನಾ ಸ್ಥಳದಲ್ಲಿದ್ದರು. ಆದ್ರೆ ಗಾಯಗೊಂಡಿರಲಿಲ್ಲ. ಇದರಿಂದ ಅನುಮಾನಗೊಂಡು ಮೂವರನ್ನು ವಶಕ್ಕೆ ಪಡೆದು ಮಾಹಿತಿ ಪಡೆಯಲಾಗುತ್ತಿದೆ. ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಲ್ಯಾಬ್‌ನಲ್ಲಿ ಮೂವರೂ ಇದ್ದರು. ಬೆಂಕಿ ಕಾಣಿಸಿಕೊಂಡಾಗಿ ಈ ಮೂವರೇ ಮೊದಲು ಹೊರಗೆ ಓಡಿಬಂದಿದ್ದಾರೆ. ಡಿ ಗ್ರೂಪ್‌ ನೌಕರರು ಅಲ್ಲಿಗೆ ಯಾಕೆ ಹೋದರು ಎಂಬ ಬಗ್ಗೆ ಅನುಮಾನ ಮೂಡಿದೆ. ಗುಣಮಟ್ಟ ಪರೀಕ್ಷೆ ಮಾಡಬೇಕಿದ್ದ ಹಿರಿಯ ಅಧಿಕಾರಿಗಳು ಡಿ ಗ್ರೂಪ್‌ ನೌಕರರಿಂದ ಕೆಲಸ ಮಾಡಿಸುತ್ತಿದ್ದರು. ಅದರಿಂದ ಈ ಅವಗಢ ಸಂಭವಿಸಿರಬಹುದೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ನಿನ್ನೆ ಸಂಜೆ ಐದು ಗಂಟೆ ಸುಮಾರಿಗೆ ಈ ಅವಘಢ ಸಂಭವಿಸಿತ್ತು.  ಚೀಫ್ ಎಂಜಿನಿಯರ್ ಶಿವಕುಮಾರ್, ನಾಲ್ವರು ಎಂಜಿನಿಯರ್‌ಗಳು ಸೇರಿ 9 ನೌಕರರು ಬೆಂಕಿ ಅವಘಡದಲ್ಲಿ ಗಾಯಗೊಂಢಿದ್ದರು. ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಆಕಸ್ಮಿಕವಲ್ಲ, ಇದರಲ್ಲಿ ಷಡ್ಯಂತ್ರ ಇದೆ ಎಂದು ಆರೋಪಿಸಲಾಗುತ್ತಿದೆ. ಈ ಬಗ್ಗೆ ರಾಜಕೀಯ ಕೆಸರೆರಚಾಟ ಕೂಡಾ ನಡೆಯುತ್ತಿದೆ.

 

Share Post