ಕೋರಮಂಗಲದ ಪಬ್‌ನಲ್ಲಿ ಬೆಂಕಿ; 4ನೇ ಮಹಡಿಯಿಂದ ಹಾರಿದ ವ್ಯಕ್ತಿ!
ಬೆಂಗಳೂರು; ಬೆಂಗಳೂರಿನ ಕೋರಮಂಗಲದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿ ತಾವರೆಕೆರೆ ಮುಖ್ಯರಸ್ತೆಯಲ್ಲಿರುವ ಫೋರಂ ಎದುರಿಗಿನ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಾಲ್ಕನೇ ಮಹಡಿಯಲ್ಲಿ ಪಬ್ ನಡೆಯುತ್ತಿದ್ದು, ಇಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ವ್ಯಕ್ತಿಯೊಬ್ಬ ಟೆರೇಸ್ ಮೇಲೆ ಹೋಗಿ ಅಲ್ಲಿಂದ ಕೆಳಗೆ ಹಾರಿದ್ದಾನೆ. ಆತನಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡ್ ಪೈಪ್ ಹುಕ್ಕಾ ಪಬ್‌ನಲ್ಲಿ ಈ ಘಟನೆ ನಡೆದಿದೆ. ಬೆಂಕಿ ಪಕ್ಕದ ಕಟ್ಟಡಕ್ಕೂ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಪಬ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ದೊಡ್ಡ ಶಬ್ದ ಬಂದಿದೆ. ಆದ್ರೆ ಆ ಶಬ್ದ ಏಕೆ ಆಯ್ತು..? ಸ್ಫೋಟ ಯಾವುದರಿಂದ ಸಂಭವಿಸಿತು ಎಂಬುದು ಇನ್ನೂ ಗೊತ್ತಾಗಿಲ್ಲ.
Video Player
00:00
00:00