BengaluruCrime

ಚಲಿಸುತ್ತಿದ್ದ ಎಲೆಕ್ಟ್ರಿಕ್‌ ಕಾರಿನಲ್ಲಿ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ

ಬೆಂಗಳೂರು; ಬೆಂಗಳೂರಿನ ಜೆಪಿ ನಗರದಲ್ಲಿ ಚಲಿಸುತ್ತಿದ್ದ ಎಲೆಕ್ಟ್ರಿಕ್‌ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಅದು ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್‌ ಚಾಲಕ ಹಾಗೂ ಮತ್ತೊಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿ ತೆರಳುತ್ತಿದ್ದಾಗ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ ರಸ್ತೆ ಬದಿ ಕಾರನ್ನು ನಿಲ್ಲಿಸಿದ್ದಾನೆ. ನೋಡನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಕಾರು ಪೂರ್ತಿ ಸುಟ್ಟು ಭಸ್ಮವಾಗಿದೆ.

Share Post