BengaluruCrime

ಮೆಜೆಸ್ಟಿಕ್‌ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ; ಎರಡು ಬೋಗಿಗಳು ಭಸ್ಮ

ಬೆಂಗಳೂರು; ಮೆಜೆಸ್ಟಿಕ್‌ನ ರೈಲು ನಿಲ್ದಾಣದಲ್ಲಿ ಅವಘಡ ಸಂಭವಿಸಿದೆ. ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಬೋಗಿಗಳು ಭಸ್ಮವಾಗಿವೆ. ಇಂದು ಬೆಳಗ್ಗೆ 7.30ರ ಸುಮಾರಿಗೆ ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಈ ಘಟನೆ ನಡೆದಿದೆ. ತಾಂತ್ರಿಕ ಸಮಸ್ಯೆಯ ಕಾರಣದಿಂದ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಆ ಬೆಂಕಿ ಎಂಜಿನ್‌ ಹಿಂದಿನ ಎರಡು ಬೋಗಿಗಳಿಗೆ ವ್ಯಾಪಿಸಿದೆ. ಇದರಿಂದಾಗಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣದವರೆಗೆ ಹೊಗೆ ಆವರಿಸಿತ್ತು.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ರೈಲು ಬೆಳಗ್ಗೆ ಆರು ಗಂಟೆಗೆ ಮುಂಬೈನಿಂದ ಬೆಂಗಳೂರಿಗೆ ಆಗಮಿಸಿತ್ತು. ಎಲ್ಲಾ ಪ್ರಯಾಣಿಕರೂ ಇಳಿದಿದ್ದರು. ರೈಲಿನಲ್ಲಿ ಯಾವ ಪ್ರಯಾಣಿಕರೂ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

 

Share Post