Bengaluru

ಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ

ಬೆಂಗಳೂರು; ಇದೇ ಮೊದಲ ಬಾರಿಗೆ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನಡೆಸಲಾಯಿತು. ಕಂದಾಯ ಇಲಾಖೆಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಗ್ಗೆ ಎಂಟು ಗಂಟೆಗೆ ಸರಿಯಾಗಿ ಚಾಮರಾಜ ಪೇಟೆ ಮೈದಾನದಲ್ಲಿ ಧ್ವಜಾರೋಹಣ ಮಾಡಲಾಯಿತು.

ಧ್ವಜಾರೋಹಣವನ್ನು ಬೆಂಗಳೂರು ಉತ್ತರ ಅಸಿಸ್ಟೆಂಟ್ ಕಮೀಷನರ್ ಡಾ.ಶಿವಣ್ಣ ನೆರವೇರಿಸಿದರು. ಸಂಸದ ಪಿಸಿ ಮೋಹನ್, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಉಪಸ್ಥಿತರಿದ್ದರು. 100ಕ್ಕೂ ಅಧಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Share Post