ಬೆಸ್ಕಾಂಗೆ ದಂಡ ಪಾವತಿ ಮಾಡಿದ ಮಾಜಿ ಸಿಎ ಕುಮಾರಸ್ವಾಮಿ
ಬೆಂಗಳೂರು; ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೆಪಿ ನಗರದ ನಿವಾಸಕ್ಕೆ ವಿದ್ಯುತ್ ದೀಪಾಲಂಕಾರ ಮಾಡಿದ್ದು, ಇದಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಹಿನ್ನೆಲೆಯಲ್ಲಿ ಬೆಸ್ಕಾಂ ವಿಧಿಸಿದ ದಂಡವನ್ನು ಮಾಜಿ ಸಿಎಂ ಕುಮಾರಸ್ವಾಮಿ ಪಾವತಿ ಮಾಡಿದ್ದಾರೆ. ಬೆಸ್ಕಾಂ ಅಧಿಕಾರಿಗಳು 68,526 ರೂಪಾಯಿ ದಂಡ ವಿಧಿಸಿದ್ದರು. ಹೀಗಾಗಿ ಕುಮಾರಸ್ವಾಮಿಯವರು 66 ಸಾವಿರ ರೂಪಾಯಿ ದಂಡ ಪವತಿ ಮಾಡಿದ್ದು, ಅದರ ಬಿಲ್ ಲಭ್ಯವಾಗಿದೆ.
ಆನ್‌ಲೈನ್ ಮೂಲಕ ದಂಡದ ಮೊತ್ತವನ್ನು ಪಾವತಿ ಮಾಡಲಾಗಿದೆ. ಇನ್ನು ಇದಕ್ಕೂ ಮೊದಲು ಕುಮಾರಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿ, ಮೂರು ಪಟ್ಟು ಹೆಚ್ಚಿನ ದಂಡ ವಿಧಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಬೆಸ್ಕಾಂ 2.5 ಕಿಲೋ ವ್ಯಾಟ್ಗೆ ಲೆಕ್ಕ ತೆಗೆದುಕೊಂಡಿದೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಬೆಸ್ಕಾಂ ಪ್ರಕಾರ, 2,526 ರೂ. ಬಿಲ್ ಬರಬೇಕಿತ್ತು. ಆದರೆ, 68,526 ರೂ. ಕರೆಂಟ್ ಬಿಲ್ ನೀಡಿದೆ. ಹೀಗಾಗಿ ಕರೆಂಟ್ ಬಿಲ್ ಬಗ್ಗೆ ಪುನರ್ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಹೇಳಿರುವುದಾಗಿ ತಿಳಿಸಿದ್ದರು.