BengaluruPolitics

ಮಾಜಿ ಶಾಸಕ ಗೌರಿ ಶಂಕರ್‌ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು; ರಾಜ್ಯದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ದಿವಂಗತ ಚೆನ್ನಿಗಪ್ಪ ಅವರ ಪುತ್ರ ಗೌರಿ ಶಂಕರ್‌ ಅವರು ಇಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿಎಸ್‌ ಪಕ್ಷ ತೊರೆದು ಗೌರಿ ಶಂಕರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಗೌರಿ ಶಂಕರ್‌ ಹಾಗೂ ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.

 

 

Share Post