BengaluruPolitics

ಮಾಜಿ ಶಾಸಕ ವಿಶ್ವನಾಥ್‌ ಪಾಟೀಲ್‌ ಹೆಬ್ಬಾಳ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು;  ಕಲಬುರಗಿ ಜಿಲ್ಲೆ ಚಿತ್ತಾಪುರದ ಬಿಜೆಪಿ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಅವರು ಇಂದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ವಿಶ್ವನಾಥ ಪಾಟೀಲ ಅವರು ಈ ಬಾರಿಯೂ ಟಿಕೆಟ್‌ ಬಯಸಿದ್ದರು. ಆದ್ರೆ ಬಿಜೆಪಿಯಿಂದ ಟಿಕೆಟ್‌ ಸಿಗದ ಕಾರಣ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ವಿಶ್ವನಾಥ ಪಾಟೀಲರ ಜೊತೆ ಇನ್ನೂ ಹಲವು ಅವರ ಬೆಂಬಲಿಗರು ಕಾಂಗ್ರೆಸ್‌ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ಬಾವುಟ ನೀಡಿ ಎಲ್ಲರನ್ನೂ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

 

Share Post