BengaluruPolitics

ಮಾಜಿ ಎಂಎಲ್‌ಸಿ ಮೋಹನ್‌ ಲಿಂಬಾಯಿಕಾಯಿ ಬಿಜೆಪಿಗೆ ಗುಡ್‌ಬೈ

ಬೆಂಗಳೂರು; ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ನಾಯಕರು ಪಕ್ಷಾಂತರ ಮಾಡುತ್ತಿದ್ದಾರೆ. ಇವತ್ತು ವಿಧಾನಪರಿಷತ್‌ ಮಾಜಿ ಸದಸ್ಯ ಮೋಹನ್‌ ಲಿಂಬಿಕಾಯಿಯವರು ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.

ಮೋಹನ್‌ ಲಿಂಬಿಕಾಯಿಯವರು ಬಿಜೆಪಿಯ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದೇ ಅವರು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲಿದ್ದಾರೆ. ಯಾವುದೇ ಷರತ್ತಿಲ್ಲದೇ ಕಾಂಗ್ರೆಸ್‌ ಸೇರುತ್ತಿದ್ದೇನೆ ಅಂತ ಅವರು ಹೇಳಿದ್ದಾರೆ. ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಿಂದ ಮೋಹನ್‌ ಲಿಂಬಿಕಾಯಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share Post