BengaluruPolitics

ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‌ಗೆ ರಾಜೀನಾಮೆ; ಯಾವ ಪಕ್ಷ ಸೇರ್ತಾರೆ..?

ಬೆಂಗಳೂರು; ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‌ಗೆ ಗುಡ್‌ ಬೈ ಹೇಳುತ್ತಿದ್ದಾರೆ. ಸಂಜೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ನನ್ನನ್ನು ಕಾಂಗ್ರೆಸ್‌ನಿಂದ ಬಿಡುಗಡೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದೇನೆ. ಸಂಜೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾನು ಕಾಂಗ್ರೆಸ್‌ ಪಕ್ಷ ತೊರೆಯುತ್ತಿದ್ದೇನೆ. ಇನ್ನೆಂದೂ ನಾನು ಕಾಂಗ್ರೆಸ್‌ ಪಕ್ಷಕ್ಕೆ ವಾಪಸ್‌ ಬರೋದಿಲ್ಲ. ೨೦೨೩ರಲ್ಲಿ ಕುಣಿಗಲ್‌ ವಿಧಾನಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುತ್ತೇವೆ. ಯಾವ ಪಕ್ಷದಿಂದ ಸ್ಪರ್ಧಿಸಬೇಕೆಂದು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಮುದ್ದಹನುಮೇಗೌಡ ಹೇಳಿದ್ದಾರೆ.

Share Post