BengaluruPolitics

ಮಾಜಿ ಸಂಸದರಾದ ಮುದ್ದಹನುಮೇಗೌಡ, ಶಶಿಕುಮಾರ್‌ ಬಿಜೆಪಿ ಸೇರ್ಪಡೆ

ಬೆಂಗಳೂರು; ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಮುದ್ದ ಹನುಮೇಗೌಡ ಹಾಗೂ ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಶಶಿಕುಮಾರ್‌ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು, ಇಬ್ಬರೂ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಇನ್ನು ಕೆಪಿಸಿಸಿ ಸದಸ್ಯರಾಗಿದ್ದ ವೆಂಕಟಾಚಲ, ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ ಕೂಡಾ ಬಿಜೆಪಿ ಪಕ್ಷಕ್ಕೆ ಸೇರಿದರು. ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ರಾಜಕಾರಣ ಹೊಸ ತಿರುವು ಪಡೆಯುತ್ತಿದೆ. ಕಾಂಗ್ರೆಸ್‌ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ ಎಂದು ಹೇಳಿದರು.

Share Post