BengaluruPolitics

ನಾಳೆಯಿಂದ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ; ಸಿಎಂ ಟಿಕೆಟ್‌ ವಿತರಣೆ ಮಾಡ್ತಾರೆ

ಬೆಂಗಳೂರು; ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದು ಯೋಜನೆ ನಾಳೆಯಿಂದ ಅಧಿಕೃತವಾಗಿ ಕಾರ್ಯರೂಪಕ್ಕೆ ಬರುತ್ತಿದೆ. ಸರ್ಕಾರಿ ಬಸ್‌ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ನಾಳೆಯಿಂದ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಬಹುದು. ಶಕ್ತಿ ಎಂಬ ಈ ಯೋಜನೆಗೆ ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದಾರೆ. ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್‌ ಕಾರ್ಡ್‌ ಕೂಡಾ ವಿತರಣೆ ಮಾಡಲಾಗುತ್ತದೆ.

ನಾಳೆ ಬೆಳಗ್ಗೆ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಬಸ್‌ನಲ್ಲಿ ಒಂದು ಸುತ್ತು ಪ್ರಯಾಣ ಮಾಡಲಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು, ಮಹಿಳೆಯರಿಗೆ ಉಚಿತ ಟಿಕೆಟ್‌ಗಳನ್ನು ವಿತರಣೆ ಮಾಡಲಿದ್ದಾರೆ.

ಮೊದಲ ಮೂರು ತಿಂಗಳು ಮಹಿಳೆಯರು ಯಾವುದೇ ಗುರುತಿನ ಚೀಟಿ ತೋರಿಸಿ ರಾಜ್ಯದೊಳಗಡೆ ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಮೂರು ತಿಂಗಳೊಳಗೆ ಸ್ಮಾರ್ಟ್‌ ಕಾರ್ಡ್‌ ಪಡೆಯುವುದು ಕಡ್ಡಾಯವಾಗಿದೆ.

Share Post