BengaluruPolitics

ಹಬ್ಬಗಳಿಗೆ ಉಚಿತ ಗ್ಯಾಸ್‌, ಅರ್ಧ ಲೀಟರ್‌ ಹಾಲು ಉಚಿತ; ಬಿಜೆಪಿ ಪ್ರಣಾಳಿಕೆ ರಿಲೀಸ್‌

ಬೆಂಗಳೂರು; ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಬಿಜೆಪಿಯವರು ಕೂಡಾ ಹಲವು ಉಚಿತ ಯೋಜನೆಗಳನ್ನು ಘೋಷಿಸಿದ್ದಾರೆ. ಬಿಪಿಎಲ್‌ ಕುಟುಂಬದವರಿಗೆ ಗಣೇಶ ಹಬ್ಬ, ಯುಗಾದಿ ಹಾಗೂ ದೀಪಾವಳಿ ಒಟ್ಟು ಮೂರು ಉಚಿತ ಎಲ್‌ಪಿಜಿ ಗ್ಯಾಸ್‌ ನೀಡೋದಾಗಿ ಭರವಸೆ ನೀಡಲಾಗಿದೆ. ಇನ್ನು ಬಿಪಿಎಲ್‌ ಕುಟುಂಬದವರಿಗೆ ಪ್ರತಿ ದಿನ ಅರ್ಧ ಲೀಟರ್‌ ಉಚಿತವಾಗಿ ನಂದಿನಿ ಹಾಲು ನೀಡೋದಾಗಿ ಹೇಳಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಇಂದು ಪ್ರಣಾಳಿಕೆಯನ್ನು ರಿಲೀಸ್‌ ಮಾಡಿದ್ದಾರೆ. ಅದರಲ್ಲಿ ಏನೇನಿದೆ ನೋಡೋಣ ಬನ್ನಿ..

1. ಪ್ರತಿ ವರ್ಷ ಯುಗಾದಿ, ಗಣೇಶ ಹಬ್ಬ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರತಿ ಬಿಪಿಎಲ್‌ ಕುಟುಂಬಕ್ಕೆ ಮೂರು ಎಲ್‌ಪಿಜಿ ಸಿಲಿಂಡರ್‌ ಉಚಿತವಾಗಿ ನೀಡೋದಾಗಿ ಘೋಷಣೆ
2. ಮಹಾನಗರ ಪಾಲಿಕೆ ವಾರ್ಡ್‌ಗಳಲ್ಲಿ ಅಟಲ್‌ ಆಹಾರ ಕೇಂದ್ರ ಸ್ಥಾಪಿಸಿ ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಅರೋಗ್ಯಕರ ಆಹಾರ ವಿತರಣೆ
3. ‘ಪೋಷಣೆ’ ಯೋಜನೆ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಉಚಿತವಾಗಿ ವಿತರಣೆ
4. ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿ ತಿಂಗಳು ಸಿರಿಧಾನ್ಯಗಳನ್ನು ಒಳಗೊಂಡಿರುವ ಆಹಾರ ಕಿಟ್‌ ವಿತರಣೆ ಮಾಡಲಾಗುತ್ತದೆ
5. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ [ಯುಸಿಸಿ) ಜಾರಿಗೊಳಿಸುತ್ತೇವೆ

6. ಸೂರು ಯೋಜನೆಯಡಿ ಹತ್ತು ಲಕ್ಷ ವಸತಿ ರಹಿತರಿಗೆ ನಿವೇಶನಗಳನ್ನು ಕಂದಾಯ ಇಲಾಖೆಯಿಂದ ಹಂಚಿಕೆ
7. ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರಿಗೆ ಹತ್ತು ಸಾವಿರ ರೂ. ಸ್ಥಿರ ಠೇವಣಿ
8. ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿ
8. ವಿಶ್ವೇಶ್ವರಯ್ಯ ವಿದ್ಯಾ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಸಂಸ್ಥೆಗಳ ಸಹಭಾಗಿತ್ವ
9. ಸಮನ್ವಯ ಯೋಜನೆಯಡಿ ತ್ವರಿತಗತಿಯಲ್ಲಿ SME ಗಳು ಮತ್ತು ITIಗಳ ನಡುವೆ ಸಮನ್ವಯತೆ
10. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆ ನಿರ್ಮಾಣ
11. ಐಎಎಸ್/ಕೆಎಎಸ್/ಬ್ಯಾಂಕಿಂಗ್/ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹ
12. ಮಿಷನ್ ಸ್ವಾಸ್ಥ್ಯ ಕರ್ನಾಟಕ ಯೋಜನೆಯಡಿ ಸರ್ಕಾರಿ ಆಸ್ಪತ್ರೆ /ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳ ಸುಧಾರಣೆ
13. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಗಳ ಸ್ಥಾಪನೆ
14. ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ
15. ಮುಂದಿನ ಪೀಳಿಗೆಗಾಗಿ ಬೆಂಗಳೂರು ನಗರ ಅಭಿವೃದ್ಧಿ. ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ
16. ಕರ್ನಾಟಕವನ್ನು ಎಲೆಕ್ಟ್ರಿಕ್‌ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸಲು ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ
17. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ‘ಕೆ-ಅಗಿ ಫಂಡ್’ ಸ್ಥಾಪನೆ

Share Post