ನಾಳೆಯಿಂದಲೇ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ; ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು; ನಾಳೆಯಿಂದಲೇ ಸರ್ಕಾರಿ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಜಾರಿಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಯಾವುದೇ ಗೊಂದಲ ಬೇಡ. ನಾಳೆಯಿಂದಲೇ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.
ಸಾರಿಗೆ ಇಲಾಖೆ ಅಧಿಕಾರಿಗಳು ಮೂರರಿಂದ ನಾಲ್ಕು ಆಯ್ಕೆಗಳನ್ನು ಕೊಟ್ಟಿದ್ದಾರೆ. ಎಲ್ಲಾ ಮಹಿಳೆಯರಿಗೂ ಉಚಿತ ಎಂದು ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ. ಆದ್ರೆ ಕಂಡೀಷನ್ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತವೆ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಸಾರಿಗೆ ಇಲಾಖೆಯಿಂದ ವರದಿ ಕೊಡುತ್ತೇವೆ. ನಾಳೆಯೇ ಉಚಿತ ಪ್ರಯಾಣ ಜಾರಿಗೆ ಬರೋದ್ರಲ್ಲಿ ಯಾವ ಅನುಮಾನವೂ ಇಲ್ಲ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟನೆ ಕೊಟ್ಟಿದ್ದಾರೆ.