ಪ್ರೌಢಶಾಲಾ ಮಕ್ಕಳಿಗೆ ತಾಂತ್ರಿಕ ಶಿಕ್ಷಣ; ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು; ಮುಂದಿನ ವರ್ಷದಿಂದಲೇ ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ತಾಂತ್ರಿಕ ಶಿಕ್ಷಣದ ಪ್ರಾಥಮಿಕ ಜ್ಞಾನ ನೀಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಿಶ್ವ ಯುವ ಕೌಶಲ್ಯ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
60ರ ದಶಕದಲ್ಲಿ ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ತಾಂತ್ರಿಕ ಶಿಕ್ಷಣದ ಜ್ಞಾನ ನೀಡಲಾಗುತ್ತಿತ್ತು. ಕ್ರಮೇಣ ಅದನ್ನು ನಿಲ್ಲಿಸಲಾಯಿತು. ಜೀವನೋಪಾಯಕ್ಕೆ ಅನುಕೂಲವಾಗುವ ತಂತ್ರಜ್ಞಾನದಲ್ಲಿ ಆಸಕ್ತಿಯನ್ನು ಬೆಳೆಸಲು ಇದು ಹೆಚ್ಚು ಅನುಕೂಲವಾಗುತ್ತದೆ. ಆದ ಕಾರಣ ಪುನಃ ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಪ್ರಾಥಮಿಕ ಜ್ಞಾನ ನೀಡಲಾಗುವುದು. ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲಿ ನಂ 1 ಆಗಬೇಕು, ವಿಶ್ವದಲ್ಲಿ 10 ರೊಗಳಗಿನ ಸ್ಥಾನವನ್ನು ಪಡೆಯುವ ನಿಟ್ಟಿಲ್ಲಿ ಪ್ರಯತ್ನ ಹಾಕಬೇಕು ಎಂದೂ ಸಿಎಂ ತಿಳಿಸಿದ್ದಾರೆ.