BengaluruPolitics

ಗೀತಾ ಶಿವರಾಜ್‌ಕುಮಾರ್‌ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆ; ಪಕ್ಷದ ಬಾವುಟ ನೀಡಿದ ಡಿಕೆಶಿ

ಬೆಂಗಳೂರು; ಬಂಗಾರಪ್ಪ ಅವರ ಪುತ್ರಿ ಹಾಗೂ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ಕುಮಾರ್‌ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಸಹೋದರ ಮಧು ಬಂಗಾರಪ್ಪ ಅವರನ್ನು ಬೆಂಬಲಿಸುವ ಸಲುವಾಗಿ ಗೀತಾ ಶಿವರಾಜ್‌ಕುಮಾರ್‌ ಅವರು ಕಾಂಗ್ರೆಸ್‌ ಸೇರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಗೀತಾ ಶಿವರಾಜ್‌ಕುಮಾರ್‌ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಪಕ್ಷದ ಬಾವುಟ ನೀಡಿ ಸ್ವಾಗತ ಕೋರಿದರು.

ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು, ನನ್ನ ನಾಯಕ ಬಂಗಾರಪ್ಪ ಅವರ ಪುತ್ರಿ ಇವರು. ರಾಜ್‌ಕುಮಾರ್‌ ಅವರ ಸೊಸೆ. ಅವರು ನಮ್ಮ ಪಕ್ಷಕ್ಕೆ ಬಂದಿರುವುದಕ್ಕೆ ಸಂತೋಷವಾಗಿದೆ. ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. ಮಧು ಬಂಗಾರಪ್ಪ ಅವರು ಸೊರಬ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ನಾಳೆಯಿಂದ ಗೀತಾ ಶಿವರಾಜ್‌ಕುಮಾರ್‌ ಅವರು ಮಧುಬಂಗಾರಪ್ಪ ಅವರಿಗಾಗಿ ಮತಯಾಚನೆ ಮಾಡಲಿದ್ದಾರೆ. ಗೀತಾ ಜೊತೆಗೆ ಶಿವರಾಜ್‌ ಕುಮಾರ್‌ ಕೂಡಾ ಪ್ರಚಾರ ಮಾಡಲಿದ್ದಾರೆ

Share Post