BengaluruCinemaPolitics

ಕಾಂಗ್ರೆಸ್‌ ಸೇರ್ತಾರಂತೆ ಗೀತಾ ಶಿವರಾಜ್‌ಕುಮಾರ್‌

ಬೆಂಗಳೂರು; ಬಂಗಾರಪ್ಪ ಅವರ ಮಗಳು, ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್‌ಕುಮಾರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ನಾಳೆಯೇ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಧಿಕೃತ ಮಾಹಿತಿ ಹೊರಬೀಳುವುದೊಂದೇ ಬಾಕಿ ಇರೋದು.

ಗೀತಾ ಅವರ ಕಿರಿಯ ಸಹೋದರ ಮಧು ಬಂಗಾರಪ್ಪ ಈ ಬಾರಿ ಸೊರಬ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಮಧು ಪರವಾಗಿ ಪ್ರಚಾರ ಮಾಡಲು ಗೀತಾ ಶಿವರಾಜ್‌ಕುಮಾರ್‌ ತೆರಳಲಿದ್ದಾರೆ. ಹೀಗಾಗಿ ಅವರು ನಾಳೆ ಕಾಂಗ್ರೆಸ್‌ ಸೇರುತ್ತಿದ್ದಾರೆಂದು ಹೇಳಲಾಗುತ್ತಿದೆ.

ಒಂದೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್‌ ಕುಮಾರ್‌ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದ್ರೆ ಮೂರನೇ ಸ್ಥಾನಕ್ಕೆ ಅವರು ತೃಪ್ತಿಪಟ್ಟುಕೊಂಡಿದ್ದರು. ಇದೀಗ ಅವರ ಸಹೋದರ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದು, ಸಹೋದರ ಪರವಾಗಿ ಪ್ರಚಾರ ಮಾಡಲು ಗೀತಾ ಅವರೂ ಕಾಂಗ್ರೆಸ್‌ ಸೇರುತ್ತಾರೆ ಎಂದು ಹೇಳಲಾಗುತ್ತಿದೆ.

 

Share Post