Bengaluru

ಕೊರೋನಾ ಹಿನ್ನೆಲೆ: ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಇದರ ಜೊತೆ ರೂಪಾಂತರಿ ತಳಿ ಒಮಿಕ್ರಾನ್‌ ಕೂಡ ಅತೀ ವೇಗದಲ್ಲಿ ಹರಡುತ್ತಿದ್ದು, ಆತಂಕ ಸೃಷ್ಟಿಸಿದೆ. ಹೀಗಾಗಿ ಸುಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದಾಗಿದೆ. ಜನವರಿ ೮ರಂದು ಜಾತ್ರೆ ನಡೆಯಬೇಕಿತ್ತು. ಜೊತೆಗೆ ಬ್ರಹ್ಮರಥೋತ್ಸವನ್ನು ರದ್ದುಗೊಳಿಸಿ, ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಮಾತ್ರ ಅನುಮತಿ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್‌ ಆದೇಶ ಹೊರಡಿಸಿದ್ದಾರೆ. ಆದರೆ ಈ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

Share Post