Bengaluru

ಉದ್ಯೋಗಾಧಾರಿತ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ಮುಂಚೂಣಿ: ರಾಜ್ಯಪಾಲ

ಬೆಂಗಳೂರು: ಗುಣಮಟ್ಟ, ತಾಂತ್ರಿಕ, ಉದ್ಯೋಗ ಆಧಾರಿತ ಶಿಕ್ಷಣವನ್ನು ಒದಗಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು ಒಂದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಸರ್ಜಾಪುರದಲ್ಲಿರುವ ಗ್ರೀನ್ ವುಡ್ ಹೈ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕಲೆ , ಸಂಗೀತ ಭವನ ಮತ್ತು ಕ್ರೀಡಾ ಸಂಕೀರ್ಣವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೊಂದಿಗೆ  ರಾಜ್ಯಪಾಲ ಥಾವರ್‌ ಚಂದ್‌ ಅನಾವರಣಗೊಳಿಸಿ ಮಾತನಾಡಿದರು.

ಮಕ್ಕಳು ಮತ್ತು ಯುವಜನರ ಭವಿಷ್ಯಕ್ಕೆ ಸರಿಯಾದ ಮಾರ್ಗವನ್ನು ತೋರಿಸಲು ಹಾಗೂ ದೇಶದಲ್ಲಿ ಅಂತರ್ಗತ ಬೆಳವಣಿಗೆಯನ್ನು ಉತ್ತೇಜಿಸಲು ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ, ತರಬೇತಿ, ಅಂತರ್ಗತ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವುದು ಇಂದಿಗೆ ಅವಶ್ಯಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಐಐಟಿ ಐಐಎಂ ನಂತಹ ದೇಶದ ದೊಡ್ಡ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳೊಂದಿಗೆ ಸಂಬಂಧ ಹೊಂದಿರುವ ಯುವಕರ ಸಂಶೋಧನೆಯಿಂದಾಗಿ, ಇಂದು ದೇಶವು ವೇಗವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದೆ. ಇಂದು ಭಾರತೀಯ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳಿ ತಮ್ಮ ಪ್ರತಿಭೆಯಿಂದ ವಿಶ್ವದ ಜನರನ್ನು ಅಚ್ಚರಿಗೊಳಿಸಿದ್ದಾರೆ ಎಂದು ರಾಜ್ಯಪಾಲರು ಶ್ಲಾಘಿಸಿದರು.

Share Post