Bengaluru

ಎಂಜಿನಿಯರಿಂಗ್ ಪ್ರವೇಶ ಶುಲ್ಕ ಶೇಕಡಾ 10ರಷ್ಟು ಹೆಚ್ಚಳ

ಬೆಂಗಳೂರು; ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ಕೊಟ್ಟಿದ್ದೆ. ಪ್ರಸಕ್ತ ವರ್ಷದಿಂದಲೇ ಹೊಸ ಶುಲ್ಕ ಜಾರಿಯಾಗಲಿದ್ದು, ಶೇಕಡಾ 10ರಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಜತೆ ಸಭೆ ನಡೆಸಿದರು. ಅನಂತರ ಮಾತನಾಡಿದ ಅವರು, ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ಕೊಟ್ಟಿರುವುದಾಗಿ ತಿಳಿಸಿದ್ದಾರೆ.

ಎರಡು ವರ್ಷಗಳಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಈ ವರ್ಷ ಶೇಕಡ 25ರಷ್ಟು ಶುಲ್ಕ ಹೆಚ್ಚಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಬೇಡಿಕೆ ಇಟ್ಟಿದ್ದವು. ಆದರೆ, ಶುಲ್ಕ ನಿಗದಿ ಸಮಿತಿ ಶೇ.10ರಷ್ಟು ಶುಲ್ಕ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಅದೇ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Share Post