Bengaluru

ಬೇಡಿಕೆ ಈಡೇರಿಕೆಗೆ ಸರ್ಕಾರದ ಒಪ್ಪಿಗೆ; ಮುಷ್ಕರ ಕೈಬಿಟ್ಟ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು; ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಖಾಸಗಿ ಸಾರಿಗೆ ಒಕ್ಕೂಟ ನಡೆಸಿದ ಮುಷ್ಕರನ್ನು ಕೈಬಿಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಫ್ರೀಡಂ ಪಾರ್ಕ್‌ನಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಕಾರಣ, ಮುಷ್ಕರ ಹಿಂಪಡೆಯಲಾಗಿದೆ.

ಮುಷ್ಕರ ನಿರತರ ಜೊತೆ ಮಾತನಾಡಿದ ರಾಮಲಿಂಗಾರೆಡ್ಡಿ, ಮುಷ್ಕರ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವು ಬೇಡಿಕೆಗಳನ್ನು ಸದ್ಯದಲ್ಲೇ ಈಡೇರಿಸುತ್ತೇವೆ. ಕೆಲ ಬೇಡಿಕೆಗಳನ್ನು ಈಡೇರಿಸಲು ಸಮಯ ಬೇಕಾಗುತ್ತದೆ ಎಂದು ರಾಮಲಿಂಗಾರೆಡ್ಡಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ.

ಸದ್ಯದಲ್ಲೇ ಹೊಸ ಆಪ್‌ ಬಿಡುಗಡೆ ಮಾಡುತೇವೆ.  ನಾನು ಆಟೋ, ಟ್ಯಾಕ್ಸಿ ಚಾಲಕರ ಪರ ಇದ್ದೇನೆ. ಇ ಆಟೋ ರಿಕ್ಷಾ ಈಗಾಗಲೇ ಸ್ಥಗಿತ ಮಾಡಲಾಗಿದೆ. ಬೈಕ್‌ ಟರಾಕ್ಸಿ ಕೇಸ್‌ ಕೋರ್ಟ್‌ನಲ್ಲಿದೆ. ಬಸ್‌ ಮಾಲೀಕರ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ. ಖಾಸಗಿ ಸಾರಿಗೆಯವರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ. ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಬ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಚಾಲಕರಿಗೆ ವಸತಿ ನೀಡುವ ಬಗ್ಗೆಯೂ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

 

Share Post