ಕೊನೆಗೂ ಮುಷ್ಕರ ಕೈಬಿಟ್ಟ ಸರ್ಕಾರಿ ನೌಕರರ ಸಂಘ
ಬೆಂಗಳೂರು; ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಇಂದಿನಿಂದ ಶುರು ಮಾಡಿದ್ದ ರಾಜ್ಯ ಸರ್ಕಾರಿ ನೌಕರರ ಮುಷ್ಕರವನ್ನು ಕೈಬಿಡಲಾಗಿದೆ. ರಾಜ್ಯ ಸರ್ಕಾರದ ಆದೇಶದ ನಮಗೆ ಸಮಾಧಾನ ತಂದಿದೆ. ರಾಜ್ಯ ಸರ್ಕಾರಕ್ಕೆ ನಾವು ಅಭಿನಂದನೆ ಸಲ್ಲಿಸುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ.
ಸರ್ಕಾರ ವೇತನ ಹೆಚ್ಚಳ ಹಾಗೂ ಒಪಿಎಸ್ ಜಾರಿ ಸಂಬಂಧ ಎರಡು ಆದೇಶಗಳು ಹೊರಡಿಸಿದೆ. ಈ ಆದೇಶಗಳನ್ನು ಪಡೆದ ನಂತರ ಸುದ್ದಿಗೋಷ್ಠಿ ನಡೆಸಿದ ಷಡಕ್ಷರಿ ಅವರು, ಮುಷ್ಕರವನ್ನು ಕೈಬಿಡುತ್ತಿರುವುದಾಗಿ ತಿಳಿಸಿದ್ದಾರೆ.