Bengaluru

ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಹಸಿರು ನಿಶಾನೆ: ಅಧಿಸೂಚನೆ ಬಿಡುಗಡೆಯೊಂದೇ ಬಾಕಿ

ಬೆಂಗಳೂರು: ಸರ್ಕಾರಿ ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಆದಷ್ಟು ಬೇಗ ರಾಜ್ಯಕ್ಕೆ ೧೫,೦೦೦ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ೫ಸಾವಿರ ಹಾಗೂ ಕರ್ನಾಟಕ ಭಾಗಕ್ಕೆ ೧೦ ಸಾವಿರ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆ ಸೂಚಿಸಿದೆ. ಕೇವಲ ಇನ್ನೊಂದು ವಾರದಲ್ಲಿ ಅಧಿಸೂಚನೆ ಬಿಡುಗಡೆ ಮಾಡುವುದಾಗಿ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಇಲಾಖೆಯ ಜವಾಬ್ದಾರು ಹಾಗಾಗಿ ೧೫.೦೦೦ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ ಮಾಡಿದೆ. ೪,೦೦೦ಅತಿಥಿ ಉಪನ್ಯಾಸಕರನ್ನು ಹೆಚ್ಚುವರಿಯಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸ್ಪಧಾತ್ಮಕ ಪರಿಕ್ಷೆ ಮೂಲಕ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆಯಲ್ಲಿ ಗಳಿಸುವ ಶ್ರೇಣಿ ಆಧಾರದ ಮೇಲೆ ಅರ್ಹರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಸಂದರ್ಶನಕ್ಕೆ ಅಂಕ ನಿಗದಿಯಾಗಲ್ಲ, ಪಾರದರ್ಶಕ ನೇಮಕಾತಿ ನಡೆಯಲಿದೆ. ಈ ಬಗ್ಗೆ ಸಮಗ್ರ ವಿವರ ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Share Post